ಹಳೇ ಕುಂದುವಾಡದ ಶ್ರೀ ಕರಿಬಸವೇಶ್ವರ ಸ್ವಾಮಿ ಪುಣ್ಯ ಕ್ಷೇತ್ರದಲ್ಲಿ ಇಂದು ಸಂಜೆ 6 ಗಂಟೆಗೆ ಕಾರ್ತಿಕ ಮಾಸದ ಪ್ರಯುಕ್ತ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.
ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಜೆ. ರಾಜಣ್ಣನವರು ಸಾನ್ನಿಧ್ಯ ವಹಿಸಲಿದ್ದಾರೆ. ಟ್ರಸ್ಟ್ ಗೌರವ ಅಧ್ಯಕ್ಷರೂ ಆದ ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸಲಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹುಲ್ಮನಿ ಗಣೇಶ್, ಡಾ. ಹೆಚ್.ಬಿ. ಅರವಿಂದ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಾರ್ಯದರ್ಶಿ ಹೆಚ್.ಕರಿಬಸಪ್ಪ ತಿಳಿಸಿದ್ದಾರೆ.