ದಾವಣಗೆರೆ, ನ. 18- ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ ಬಣ) ನಾಡಿದ್ದು ದಿನಾಂಕ 20 ರ ಬುಧವಾರ ಬೆಳಿಗ್ಗೆ 10.30 ಕ್ಕೆ ನಗರದ ಎಪಿಎಂಸಿ ಭವನದಲ್ಲಿ ರಾಜ್ಯ ಸಮಿತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸೇನೆಯ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯಿದೆಗಳನ್ನು ಈ ಕೂಡಲೇ ಕೈಬಿಡಬೇಕು. ಜಿಲ್ಲೆಯಲ್ಲಿ ನೀರಾವರಿ ಯೋಜನೆಯನ್ನು ಸಮಗ್ರವಾಗಿ ಅನುಷ್ಠಾನಗೊಳಿಸಬೇಕು. ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಆಗ್ರಹಿಸಿದರು.
ಎಲ್ಲಾ ಜಿಲ್ಲೆಗಳಲ್ಲಿ ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕುಪತ್ರವನ್ನು ನೀಡಬೇಕು. ರೈತರ ಪಂಪ್‌ಸೆಟ್‌ಗಳಿಗೆ ಆಧಾರ ಜೋಡಣೆಯನ್ನು ಕೈಬಿಡಬೇಕು. ರೈತರ ಜಮೀನಿನ ಪಹಣಿಯಲ್ಲಿ ವಕ್ಫ್‌ಬೋರ್ಡ್ ನೀತಿಯನ್ನು ಕೈಬಿಡಬೇಕೆಂಬುದು ಸೇರಿದಂತೆ ಅನೇಕ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸೇನೆಯ ಪದಾಧಿಕಾರಿಗಳಾದ ಕೆಂಚಮ್ಮನಹಳ್ಳಿ ಹನುಮಂತಪ್ಪ, ಚಿಕ್ಕಬೂದಿಹಾಳ್ ಭಗತ್ ಸಿಂಹ, ಕೋಲ್ಕುಂಟೆಯ ಉಚ್ಚೆಂಗೆಪ್ಪ, ಬಸವರಾಜ್, ಹೊಟ್ಟಿಗೇನಹಳ್ಳಿಯ ಸುನೀಲ್ ಉಪಸ್ಥಿತರಿದ್ದರು.