ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್ಎಸ್ ಸ್ಕೌಟ್ ಅಂಡ್ ಗೈಡ್ಸ್‌ನ ವಿವಿಧ ವೇದಿಕೆ ಕಾರ್ಯಕ್ರಮ ಇಂದು ಬೆಳಿಗ್ಗೆ ನಡೆಯಲಿದೆ. ಕಾರ್ಯಕ್ರಮವನ್ನು ಸಚಿವ ಎಸ್‌ಎಸ್ ಮಲ್ಲಿಕಾರ್ಜುನ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಡಾ.ಹೆಚ್.ವಿ. ವಾಮದೇವಪ್ಪ, ಪಾಲಿಕೆ ಆಯುಕ್ತ ರಾದ ಶ್ರೀಮತಿ ರೇಣುಕಾ ಭಾಗವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಬಿ.ಸಿ. ತಹಶೀಲ್ದಾರ್ ವಹಿಸುವರು. ಕಾರ್ಯಕ್ರಮದಲ್ಲಿ ಪಿ. ಗುರುರಾಜ್, ಯು.ಸಿ. ನರೇಶ್ ಹಾಗೂ ಇತರೆ ವೇದಿಕೆಗಳ ಸದಸ್ಯರು ಭಾಗವಹಿಸುವರು.
December 22, 2024