ಚಿಗಟೇರಿ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ವಿಭಾಗಗಳ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಟ್ರಾಮಾ ಕೇರ್ ಕಟ್ಟಡ ಹಾಗೂ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರು ಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಡಿ.ಜಿ. ಶಾಂತನಗೌಡ ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಕೆ.ಅಬ್ದುಲ್ ಜಬ್ಬಾರ್, ಮೇಯರ್ ಕೆ.ಚಮನ್ ಸಾಬ್, ದೂಡಾ ಅಧ್ಯಕ್ಷ ದಿನೇಶ್.ಕೆ.ಶೆಟ್ಟಿ ಮತ್ತು ಇತರರು.