ಸಪ್ತಗಿರಿ ಪ್ರೌಢಶಾಲೆಯಲ್ಲಿ ಇಂದು ಬೆಳಿಗ್ಗೆ 9.30ಕ್ಕೆ ಶಾಲಾ ಮಕ್ಕಳಿಗಾಗಿ ಕಾನೂನು ಅರಿವು ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಶ್ರೀಮತಿ ನಿವೇದಿತಾ ಟಿ.ಎಂ. ಉದ್ಘಾಟಿಸುವರು.
ಮುಖ್ಯ ಅತಿಥಿಯಾಗಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಕರೆಣ್ಣವರ ಭಾಗವಹಿಸುವರು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರು ವಹಿಸುವರು. ಶಿಕ್ಷಣ ಇಲಾಖೆಯ ಬಿ.ಇ.ಓ. ಮತ್ತು ಬಿ.ಆರ್.ಸಿ. ಗಳು ಭಾಗವಹಿಸಲಿದ್ದಾರೆ.