ದಾವಣಗೆರೆ,ನ.20- ಖಾಲಿ ಇರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಇದೇ ದಿನಾಂಕ 23 ರಂದು ಮತದಾನ ನಡೆಯಲಿದ್ದು, ಉಪಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಡೆಯುವ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ನ್ಯಾಮತಿ ತಾಲ್ಲೂಕಿನ ಚಿನ್ನಿಕಟ್ಟಿ, ಹರಿಹರ ತಾಲ್ಲೂಕಿನ ಸಾರಥಿ, ಉಕ್ಕಡಗಾತ್ರಿ, ದಾವಣಗೆರೆ ತಾಲ್ಲೂಕಿನ ಗೋಪನಾಳ, ಹೆಬ್ಬಾಳು, ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ, ತಣಿಗೆರೆ, ಬೆಳ್ಳಗನೂಡು, ಸಂತೆಬೆನ್ನೂರು, ಜಗಳೂರು ತಾಲ್ಲೂಕಿನ ಹನುಮಂತಾಪುರ, ಬಸವನಕೋಟೆ, ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುವ ಸಂತೆ, ಜಾತ್ರೆಗಳನ್ನು ನಿಷೇಧಿಸಲಾಗಿದೆ.