ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ, ನ. 20 – ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ssp.postmatric.karnataka.gov.in    ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:080-22261789 ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಚನ್ನಗಿರಿ ದೂ.ಸಂ: 08192-262002 ನ್ನು ಸಂಪರ್ಕಿಸಬಹುದೆಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

error: Content is protected !!