ವಿಕಲಚೇತನರಿಗೆ ಕ್ರೀಡಾ ಸ್ಪರ್ಧೆ

ದಾವಣಗೆರೆ, ನ. 22 – ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಇದೇ ದಿನಾಂಕ 26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ವಿಕಲಚೇತನರಿಗೆ ಕ್ರೀಡಾ  ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಮಹಿಳಾ ಮತ್ತು ಪುರುಷರಿಗೆ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ನಡೆಸಲಾಗುತ್ತದೆ. ವಿವರಕ್ಕೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಾವಣಗೆರೆ  ದೂ.ಸಂ: 08192-263936 ನ್ನು ಸಂಪರ್ಕಿಸಬಹುದು. 

error: Content is protected !!