ದಾವಣಗೆರೆ, ನ.22- ಅಖಂಡ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಲ್ಲಿನ ಜಯದೇವ ವೃತ್ತದ ಶಿವಯೋಗ ಮಂದಿರದಲ್ಲಿ ನಾಳೆ ದಿನಾಂಕ 23ರ ಶನಿವಾರ ಸಂಜೆ 6ಕ್ಕೆ `ಕನ್ನಡ ರಾಜ್ಯೋತ್ಸವ’ ಹಾಗೂ `ನುಡಿ-ಹಬ್ಬ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಎಸ್.ಜಿ. ಸೋಮಶೇಖರ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿರಕ್ತ ಮಠದ ಶ್ರೀ ಬಸವ ಪ್ರಭು ಸ್ವಾಮೀಜಿ ಹಾಗೂ ಕೋಡಿಯಾಲ ಹೊಸಪೇಟೆಯ ಪುಣ್ಯಕೋಟಿ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಅಕರವೇ ರಾಜ್ಯಾಧ್ಯಕ್ಷ ಬಿ.ಜಿ. ಅಜಯ್ ಕುಮಾರ್ ಅಧ್ಯಕ್ಷತೆ ವಹಿಸುವರು. ಮೇಯರ್ ಚಮನ್ ಸಾಬ್, ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ, ಎಸ್.ಟಿ. ವೀರೇಶ್, ಪತ್ರಕರ್ತ ನಾಗರಾಜ್ ಬಡದಾಳ್ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಎಸ್. ಮೋಹನ್, ನೌಶಿನ್ ತಾಜ್, ಎಸ್. ಶ್ರೇಯಸ್, ಕಾವೇರಿ, ಲಕ್ಷ್ಮಿ, ಸಂಜಯ್, ಫೌಜಿಯಾ ಸುದ್ದಿಗೋಷ್ಠಿಯಲ್ಲಿದ್ದರು.