ಚನ್ನಗಿರಿ, ನ.26- ತಾಲ್ಲೂಕಿನ ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಇದೇ ದಿನಾಂಕ 30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಚನ್ನಗಿರಿ ಕಚೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.