ಬಸವ ತತ್ವ ಹಾಗೂ ಸಂವಿಧಾನದ ಆಶಯಗಳ ಪ್ರಚಾರ ಸಭೆಯನ್ನು ಇಂದು ಮಧ್ಯಾಹ್ನ 2.30ಕ್ಕೆ ಹರಪನಹಳ್ಳಿ ತಾಲ್ಲೂಕಿನ ಅಣಜಿಗೆರೆ ಗ್ರಾಮದ ಡಾ|| ಪಾನಾಬ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಾನವ ಬಂಧುತ್ವ ವೇದಿಕೆ ದಾವಣಗೆರೆ ತಾಲ್ಲೂಕು ಮತ್ತು ಜಿಲ್ಲಾ ಸಮಿತಿ ಹಾಗೂ ಶರಣ ಸಾಹಿತ್ಯ ಪರಿಷತ್ತು ದಾವಣಗೆರೆ ತಾಲ್ಲೂಕು ಘಟಕ ಇವರುಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿ.ಹೆಚ್. ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ್ ಪಾಟೀಲ್ ಉದ್ಘಾಟಿಸಲಿದ್ದು, ಡಾ|| ಪಾನಾಬ ಶಾಲೆಯ ಮುಖ್ಯೋಪಾಧ್ಯಾಯ ಕೆ. ಶಿವಯೋಗಿ ಅಧ್ಯಕ್ಷತೆ ವಹಿಸಲಿದ್ದಾರೆ.
ಶರಣ ಸಾಹಿತ್ಯ ಪರಿಷತ್ತು ದಾವಣಗೆರೆ ತಾ|| ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಂ. ವಿಶ್ವೇಶ್ವರಯ್ಯ `ಬಸವ ತತ್ವ ಪ್ರಚಾರ’ ಕುರಿತು ಉಪನ್ಯಾಸ ನೀಡಲಿದ್ದು, ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಲಕ್ಷ್ಮಣ್ ರಾಮವತ್ ವಕೀಲರು ಇವರು ಸಂವಿಧಾನದ ಮೌಲ್ಯಗಳ ಮಹತ್ವ ತಿಳಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ತಾಲ್ಲೂಕು ಸಂಚಾ ಲಕ ಹನುಮಂತ ಕರೂರು, ಸಹ ಶಿಕ್ಷರಾದ ಸತೀಶ್, ಶ್ರೀಮತಿ ಕೊಟ್ರಮ್ಮ, ಲಿಂಗರಾಜು, ನಿರಂಜನ್, ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು ವಹಿಸಲಿದ್ದಾರೆ. ಮಕಬಲ್ ಬಾಷಾ ಕಾರ್ಯಕ್ರಮ ನಿರ್ವಹಿಸಲಿದ್ದು, ರಾಘವೇಂದ್ರ ಎಳೆ-ಹೊಳೆ ಸಾರಥಿ ಕಾರ್ಯಕ್ರಮ ಸಂಯೋಜನೆ ಮಾಡಲಿದ್ದಾರೆ.