ದಾವಣಗೆರೆ ಎಸ್.ಎಸ್. ಬಡಾವಣೆ `ಬಿ’ ಬ್ಲಾಕ್‌ನಲ್ಲಿರುವ ಬಾಪೂಜಿ ಬಿ-ಸ್ಕೂಲ್ಸ್ ಆಡಿಟೋರಿಯಂ ನಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ರಾಜ್ಯ ಮಟ್ಟದ ವಾಣಿಜ್ಯ ಎಕ್ಸಿಬಿಷನ್ `6ನೇ ವಾಣಿಜ್ಯೋತ್ಸವ-2024′ ಏರ್ಪಡಿಸಲಾಗಿದೆ.
ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್‌ನ ಅಧ್ಯಕ್ಷ ಡಾ. ಅಥಣಿ ಎಸ್. ವೀರಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ವಾಣಿಜ್ಯ ವಿಭಾಗದ ಅಧ್ಯಕ್ಷೆ ಡಾ. ಸುಪ್ರಿಯಾ ಆರ್. ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಎಂ.ಎಸ್.ಬಿ. ಕಾಲೇಜಿನ ಪ್ರಾಂಶುಪಾಲರಾದ ನೀಲಾಂಬಿಕಾ ಜಿ.ಸಿ.,ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್‌ನ ಪ್ರಾಂಶುಪಾಲ ಡಾ. ಬಿ. ವೀರಪ್ಪ, ನಿರ್ದೇಶಕ ಡಾ. ಸ್ವಾಮಿ ತ್ರಿಭುವಾನಂದ ಹೆಚ್.ವಿ. ಉಪಸ್ಥಿತರಿರುವರು.