ಹರಿಹರ ಹಿಂದೂ ರುದ್ರಭೂಮಿಯಲ್ಲಿ ಇಂದು ಮೌಢ್ಯ ವಿರೋಧಿ ಪರಿವರ್ತನಾ ದಿನಾಚರಣೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ಹಾಗೂ ಮಾನವ ಬಂಧುತ್ವ ವೇದಿಕೆ ವತಿಯಿಂದ ಹಿಂದೂ ರುದ್ರಭೂಮಿಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಡಾ. ಅಂಬೇಡ್ಕರ್ ಅವರ 68 ನೇ ಮಹಾಪರಿನಿಬ್ಬಣ ಸದ್ಭಾವನಾ ದಿನವನ್ನು ಮೌಢ್ಯ ವಿರೋಧಿ ಪರಿವರ್ತನಾ ದಿನವನ್ನಾಗಿ ಆಚರಿಸಲಾಗುವುದು.

ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ.ಎ.ಬಿ. ರಾಮಚಂದ್ರಪ್ಪ ಉಪನ್ಯಾಸ ನೀಡುವರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಹರಿಹರ ತಾಲ್ಲೂಕು ಅಧ್ಯಕ್ಷ ಎಂ.ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. 

ರಾಜ್ಯ ಸಂಘಟನಾ ಸಂಚಾಲಕ ಹೆಗ್ಗೆರೆ ರಂಗಪ್ಪ, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ನಗರಸಭೆ ಅಧ್ಯಕ್ಷೆ ಕವಿತಾ ಮಾರುತಿ ಬೇಡರ್, ಸಿಪಿಐ ದೇವಾನಂದ್, ಕಾರ್ಮಿಕ ಮುಖಂಡ ಹೆಚ್.ಕೆ.ಕೊಟ್ರಪ್ಪ, ದಲಿತ ಮುಖಂಡ ಎಂ.ಬಿ. ಅಣ್ಣಪ್ಪ, ಸಂತೋಷ್ ನೋಟದ, ಮಂಜುನಾಥ್ ಕುಪ್ಪೇಲೂರು, ಸುಭಾಷ್ ಚಂದ್ರ ಬೋಸ್, ಆನಂದ, ಮಂಜುನಾಥ ದೊಡ್ಮನಿ, ಜಿ.ಎಂ. ಮಂಜಪ್ಪ, ಬಿ.ಕೆ. ವಿಶ್ವ, ಧನರಾಜ್, ಭರತ್ ಮುದೇನೂರು, ನಾಗರಾಜ್ ರಾಮತೀರ್ಥ ಪಾರ್ವತಿ ಬೋರಯ್ಯ ಮತ್ತಿತರರು ಭಾಗವಹಿಸಲಿದ್ದಾರೆ. 

error: Content is protected !!