5ರಂದು ವೃತ್ತಿ ನಾಟಕ ಕಂಪನಿಗಳ ಮಾಲೀಕರ ಸಭೆ

ದಾವಣಗೆರೆ, ಡಿ. 2 – ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜನ ಕಡಕೋಳ ಅವರ ಅಧ್ಯಕ್ಷತೆಯಲ್ಲಿ ಇದೇ ದಿನಾಂಕ 5ರ ಗುರುವಾರ ಬೆಳಿಗ್ಗೆ 11ಕ್ಕೆ ಜಿಲ್ಲಾಡಳಿತ ಭವನದಲ್ಲಿ ವೃತ್ತಿ ನಾಟಕ ಕಂಪನಿಗಳ ಮಾಲೀಕರ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. 

ಸಭೆಗೆ ಜಿಲ್ಲೆಯ ವೃತ್ತಿ ನಾಟಕ ಕಂಪನಿಗಳ ಮಾಲೀಕರನ್ನು ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.

error: Content is protected !!