ದಾವಣಗೆರೆ, ಡಿ.2 – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯ ಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‍ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜು ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವೆಬ್‍ಸೈಟ್ http://bcwd.karnataka.gov.in ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಇದೇ ದಿನಾಂಕ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 8050770004 ಸಹಾಯವಾಣಿ ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಾಯತ್ರಿ ಕೆ.ಹೆಚ್ ಇವರು ತಿಳಿಸಿದ್ದಾರೆ.
December 4, 2024