ನಗರದಲ್ಲಿ ಇಂದು ಅನುದಾನಿತ ಪ.ಪೂ. ಕಾಲೇಜು ನೌಕರರ ಸಂಘದ ಉದ್ಘಾಟನೆ

ದಾವಣಗೆರೆ, ಡಿ.3- ಕರ್ನಾಟಕ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ವಿಭಾಗೀಯ ಮಟ್ಟದ ಸಮಾವೇಶವನ್ನು ನಾಳೆ ದಿನಾಂಕ 4ರ ಬುಧವಾರ ಅಥಣಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗರಾಜ್ ಎಸ್.ಜಿ. ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 

ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕರು ಆಗಮಿಸಲಿದ್ದಾರೆ. 

ಸಂಘದ ರಾಜ್ಯಾಧ್ಯಕ್ಷ ಹೆಚ್.ಚಂದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ಗೌರವಾಧ್ಯಕ್ಷ ಪ್ರದೀಪ್ ಕುಮಾರ್ ಎಸ್., ಅಧ್ಯಕ್ಷ ಚಂದ್ರಪ್ಪ ಹೆಚ್., ಕಾರ್ಯಾಧ್ಯಕ್ಷ ಜೆ.ಶಿವಪ್ಪ, ಪ್ರಧಾನ ಕಾರ್ಯದರ್ಶಿ ಮಲ್ಲೇಶಪ್ಪ ಎಂ.ಬಿ, ಕೋಶಾಧ್ಯಕ್ಷ ಮಧುಕುಮಾರ್ ಎಸ್.ಬಿ., ಸಹ ಕಾರ್ಯದರ್ಶಿ ದಯಾನಂದ ಡಿ. ಉಪಸ್ಥಿತರಿದ್ದರು.

error: Content is protected !!