ಇಂದಿನಿಂದ ಮಕ್ಕಳ ಅಹವಾಲು, ಮಕ್ಕಳ ಕಾಯ್ದೆ ಅರಿವು ಕಾರ್ಯಕ್ರಮ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ  ಮಕ್ಕಳ ಅಹವಾಲು ಹಾಗೂ ಮಕ್ಕಳ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವು ಇಂದು – ನಾಳೆ ನಡೆಯಲಿದೆ.

ಇಂದು ಬೆಳಗ್ಗೆ 10.30ಕ್ಕೆ ಚನ್ನಗಿರಿ ವಾಲ್ಮೀಕಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳಿಗೆ ಜೆ.ಜೆ.ಕಾಯ್ದೆ-2015, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಆರ್‍ಟಿಇ ಕಾಯ್ದೆ-2009, ಭ್ರೂಣ ಹತ್ಯೆ, ವಲಸೆ ಕುಟುಂಬದಲ್ಲಿನ ಮಕ್ಕಳ ರಕ್ಷಣೆ, ಮಕ್ಕಳ ಸಾಗಾಣಿಕೆ ಮತ್ತು ಮಾರಾಟ ನಿಷೇಧ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ ಕುರಿತು ಸಭೆ ನಡೆಯಲಿದೆ.

ನಾಳೆ ಗುರುವಾರ ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳಿಗೆ ಮಕ್ಕಳ ಕಾಯ್ದೆಗಳಿಗೆ ಸಂಬಂಧಿಸಿದಂತೆ ಮಕ್ಕಳ ಅಹವಾಲು ಹಾಗೂ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

error: Content is protected !!