ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದ್ದು, ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮತ್ತು ಬೆಳಿಗ್ಗೆ 10.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಗಣ್ಯರಿಂದ ಮಾಲಾರ್ಪಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಅಂಬೇಡ್ಕರ್ ವೃತ್ತದಲ್ಲಿ ಸ್ವಚ್ಚತೆಯನ್ನು ಮಾಡಲು ಮತ್ತು ಇದಕ್ಕೆ ಬೇಕಾದ ಸಿದ್ದತೆಯನ್ನು ಕೈಗೊಳ್ಳಲು ಪಾಲಿಕೆಯಿಂದ ಕ್ರಮ ವಹಿಸಲು ತಿಳಿಸಿದ್ದು ಸಾರ್ವ ಜನಿಕರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದೆಂದು ಅವರು ತಿಳಿಸಿದ್ದಾರೆ.