ಮಾನವ ಹಕ್ಕುಗಳ ದಿನ : ಕಡ್ಡಾಯ ಆಚರಣೆಗೆ ಕರೆ

ದಾವಣಗೆರೆ, ಡಿ.9- ಜಿಲ್ಲೆಯ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದ ಕಚೇರಿಗಳಲ್ಲಿ ಕಡ್ಡಾಯವಾಗಿ ನಾಳೆ ದಿನಾಂಕ 10 ರ ಮಂಗಳವಾರ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಪ್ರತಿ ಜಿಲ್ಲೆಯಲ್ಲಿ ಮತ್ತು ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆಯನ್ನು ಪ್ರತೀ ವರ್ಷದಂತೆ ಈ ವರ್ಷವೂ ಸಹ ವಿಶೇಷವಾಗಿ ಮಾನವ ಹಕ್ಕುಗಳ ದಿನಾಚರಣೆ ಆಚರಿಸಲು ನಿರ್ಧಾರ ಕೈಗೊಂಡಿದ್ದು, ಆಯೋಗದ ನಿರ್ದೇಶನದಂತೆ, ದಿನಾಂಕ 10 ರಂದು ಎಲ್ಲಾ ಇಲಾಖೆಗಳ ಕಚೇರಿಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆ ಆಚರಿಸಬೇಕು.

ನಗರದಲ್ಲಿ ದಿನಾಂಕ 10ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಆರ್.ಎಲ್.ಕಾನೂನು ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

error: Content is protected !!