ದಾವಣಗೆರೆ, ಡಿ.10- ರಾಜ್ಯದ 10ನೇ ಮುಖ್ಯಮಂತ್ರಿ ಹಾಗೂ ಕೇಂದ್ರದ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರು ವಿಧಿವಶರಾಗಿರುತ್ತಾರೆ.
ಕೃಷ್ಣ ನಿಧನದ ಸುದ್ದಿ ಕೇಳಿ ಟೈಲ್ಸ್, ಗ್ರಾನೈಟ್, ಮಾರ್ಬಲ್, ಕೂಲಿ ಕಾರ್ಮಿಕರ ಸಂಘದಿಂದ ಅಧ್ಯಕ್ಷ ಮುರುಗನ್ ನೇತೃತ್ವದಲ್ಲಿ ಒಂದು ನಿಮಿಷ ಮೌನ ಆಚರಣೆ ಮಾಡಿ ಸಂತಾಪ ಸೂಚಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.