ಎಸ್.ಎಂ. ಕೃಷ್ಣ ಜೀವನ ತೆರೆದ ಪುಸ್ತಕವಿದ್ದಂತೆ -ಶಾಸಕ ಕೆ.ಎಸ್. ಬಸವಂತಪ್ಪ ಪ್ರಶಂಸೆ

ದಾವಣಗೆರೆ, ಡಿ.10 – ಇಂದಿನ ತಲೆಮಾರಿನ ರಾಜಕಾರಣಿಗಳಿಗೆ ಅವರ ರಾಜಕೀಯ ಜೀವನ ತೆರೆದಿರುವ ಪುಸ್ತಕ. ಬೆಂಗಳೂರು ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಮಹತ್ತರ ಕೊಡುಗೆ ನೀಡಿದ್ದಾರೆ. ಅವರಿಂದಲೇ ಬೆಂಗಳೂರು ವಿಶ್ವ ಮಟ್ಟದಲ್ಲಿ ಸಿಲಿಕಾನ್ ಸಿಟಿ, ಐಟಿ-ಬಿಟಿ ಸಿಟಿ ಎಂಬ ಹೆಸರು ಬಂದಿತ್ತು. ಯಶಸ್ವಿನಿ ಯೋಜನೆ, ಸ್ತ್ರೀಶಕ್ತಿ ಸಂಘಗಳ ಉಗಮ, ಮಕ್ಕಳಿಗೆ ಬಿಸಿಯೂಟ, ಅಕ್ಷರ ದಾಸೋಹ ಹೀಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ ಧೀಮಂತ ನಾಯಕ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಎಸ್.ಎಂ.ಕೃಷ್ಣ ಅವರ ಕಾರ್ಯಗಳನ್ನು ಸ್ಮರಿಸಿದ್ದಾರೆ.

ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ತಲೆದೋರಿದ್ದ ಕಾವೇರಿ ಚಳವಳಿ, ಡಾ.ರಾಜ್‌ಕುಮಾರ್ ಅಪಹರಣ ಪ್ರಕರಣ, ಬರಗಾಲದ ಬಿಸಿ ಇಂತಹ ಕಠಿಣ ಸಂದರ್ಭದಲ್ಲಿ ವಿಪಕ್ಷಗಳ ಟೀಕೆಗಳನ್ನು ಸಮರ್ಥವಾಗಿ ಎದುರಿಸಿ ಆ ಸಮಸ್ಯೆಗಳಿಗೆ ಪರಿಹಾರ ನೀಡಿದ್ದರು. ಮುಖ್ಯಮಂತ್ರಿ, ವಿದೇಶಾಂಗ ಸಚಿವ, ರಾಜ್ಯಪಾಲರಂತಹ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.

 ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

error: Content is protected !!