ದಾವಣಗೆರೆ, ಡಿ.11- ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಧೀಮಂತ ರಾಜಕಾರಣಿ ಮುತ್ಸದ್ಧಿಗಳೂ, ಕರ್ನಾಟಕದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿ ಎಸ್.ಎಂ. ಕೃಷ್ಣ ನಿಧನರಾಗಿರುವುದನ್ನು ಕೇಳಿ ನಮಗೆ ಒಬ್ಬ ಉತ್ತಮ ಮಾರ್ಗದರ್ಶಕನನ್ನು ಕಳೆದುಕೊಂಡ ಅನಾಥ ಪ್ರಜ್ಞೆ ನಾಡಿನ ಜನತೆಗೆ ಕಾಡುತ್ತದೆ ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಮೃತರಿಗೆ ನುಡಿ ನಮನ ಸಲ್ಲಿಸಿದ್ದಾರೆ.
ಕನ್ನಡ ನಾಡು, ನುಡಿ, ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಹಿರಿಯ ಚೇತನರಾಗಿದ್ದ ಎಸ್.ಎಂ. ಕೃಷ್ಣ ಅವರ ಆತ್ಮಕ್ಕೆ ಚಿರಶಾಂತಿ ಬಯಸಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಹಾಗೂ ಎಲ್ಲಾ ಕನ್ನಡದ ಮನಸ್ಸುಗಳ ಪರವಾಗಿ ಸಮರ್ಪಿಸುತ್ತೇವೆ.