ಇಲ್ಲಿನ ಪುರಸಭೆಯ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಸಲಾಗುವುದು ಎಂದು ತಹಶೀಲ್ದಾರ್ ಗುರುಬಸವರಾಜ್ ತಿಳಿಸಿದ್ದಾರೆ. ಮಲೇಬೆನ್ನೂರು ಪುರಸಭೆಯ 10ನೇ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದ್ದು, ಜೆಡಿಎಸ್ ಸದಸ್ಯ ಟಿ. ಹನುಮಂತಪ್ಪ ಅವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಇಲ್ಲಿ ಕಾಂಗ್ರೆಸ್ ಬಹುಮತ ಹೊಂದಿದ್ದರೂ ಎಸ್ಟಿ ಮೀಸಲಾತಿಯ ಸದಸ್ಯರಿಲ್ಲದ ಕಾರಣ
3 ಜನ ಸದಸ್ಯರನ್ನು ಹೊಂದಿದ ಜೆಡಿಎಸ್‌ಗೆ ಬಹಳ ಸುಲಭವಾಗಿ ಅಧಿಕಾರ ಸಿಗುವ ಸಾಧ್ಯತೆ ಇದೆ. ಒಂದು ವೇಳೆ ಕಾಂಗ್ರೆಸ್ ಸದಸ್ಯರು ಚುನಾವಣಾ ಸಭೆಗೆ ಗೈರು ಹಾಜರಾದರೆ ಕೋರಂ ಕೊರತೆಯಿಂದ ಚುನಾವಣೆಯನ್ನು ಮುಂದೂಡಿದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಅಲ್ಲದೇ ಮೀಸಲಾತಿ ಬದಲಾವಣೆ ಕೋರಿ ಸದಸ್ಯರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದು, ಅದರ ಆದೇಶದ ನಿರೀಕ್ಷೆ ಕೂಡ ಇದೆ.