ಸ್ವದೇಶಿ ಮೇಳದಲ್ಲಿ ಇಂದು ನಿತ್ಯ ಬಳಕೆ ವಸ್ತುಗಳ ತಯಾರಿಕಾ ಶಿಬಿರ

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆಯುತ್ತಿರುವ ಸ್ವದೇಶಿ ಮೇಳದಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ನಿತ್ಯ ಬಳಕೆ ವಸ್ತುಗಳ ತಯಾರಿಕಾ ಶಿಬಿರವನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 2 ಗಂಟೆಗೆ ಕಾಲೇಜು ವಿದ್ಯಾರ್ಥಿಗಳಿಗೆ ನಿರುದ್ಯೋಗ ಸಮಸ್ಯೆ, ಪರಿಹಾರದ ಮಾರ್ಗಗಳು ಕುರಿತು ಒಂದು ವಿಚಾರ ಗೋಷ್ಟಿ. ಸಂಜೆ 6 ಗಂಟೆಗೆ ಜಾನಪದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. 

ಮೇಳಕ್ಕೆ ಉಚಿತ ಪ್ರವೇಶ ಇದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಸ್ವದೇಶಿ ಮೇಳದ ಸಂಯೋಜಕರು ತಿಳಿಸಿದ್ದಾರೆ. 

error: Content is protected !!