ಭಾರತದ ಅತಿ ದೊಡ್ಡ ಪುಸ್ತಕ ಭಂಡಾರ `ಸ್ವಪ್ನಾ ಬುಕ್ ಹೌಸ್’ ಇದರ 23 ನೇ ನೂತನ ಶಾಖೆಯು ಇಂದು ಮಧ್ಯಾಹ್ನ 12 ಗಂಟೆಗೆ ಎವಿಕೆ ಕಾಲೇಜು ರಸ್ತೆಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸ್ವಪ್ನಾ ಬುಕ್ ಹೌಸ್ ಮಾಲೀಕರೂ ಆದ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಷಾ ತಿಳಿಸಿದರು.
ಜಿಲ್ಲಾಧಿಕಾರಿ ಜಿ.ಎನ್. ಗಂಗಾಧರಸ್ವಾಮಿ ಶಾಖೆಯನ್ನು ಉದ್ಘಾಟಿಸಿದ ನಂತರ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಗುರುಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.
ನಾಡೋಜ ಪ್ರೊ. ಹಂಪ ನಾಗರಾಜಯ್ಯ ಅಧ್ಯಕ್ಷತೆ ವಹಿಸುವರು. ಎಸ್ಪಿ ಉಮಾ ಪ್ರಶಾಂತ್ ದೀಪಾರಾಧನೆ ಮಾಡುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿವಿ ಕುಲಪತಿ ಪ್ರೊ. ಬಿ.ಡಿ. ಕುಂಬಾರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.
ಇದೇ ವೇಳೆ ಬಸವ ಕಲಾ ಲೋಕದ ಅರುಣ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.