ದಾವಣಗೆರೆ ಜಿಲ್ಲಾ ಟೆನ್ನಿಸ್ ಅಸೋಸಿಯೇಷನ್ ವತಿಯಿದ ಇಂದಿನಿಂದ ಮೂರು ದಿನ ರಾಜ್ಯ ಮಟ್ಟದ ಆಹ್ವಾನಿತ ಟೆನ್ನಿಸ್ ಪಂದ್ಯಾವಳಿಯನ್ನು ಹೈಸ್ಕೂಲ್ ಮೈದಾನದಲ್ಲಿರುವ ಟೆನ್ನಿಸ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಇಂದು ಬೆಳಿಗ್ಗೆ 8.30ಕ್ಕೆ ನಡೆಯುವ ದಾವಣಗೆರೆ ಓಪನ್ ಟೆನಿಸ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ನೆರವೇರಿಸಲಿದ್ದು, ಗೌರವ ಅತಿಥಿಯಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಮುಖ್ಯ ಅತಿಥಿಗಳಾಗಿ ಮೇಯರ್ ಕೆ. ಚಮನ್ ಸಾಬ್, ಸದಸ್ಯ ಬಿ.ಜಿ. ಅಜಯ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.