ಹೋಟೆಲ್, ಲಾಡ್ಜ್, ಕಲ್ಯಾಣ ಮಂಟಪ ಮಾಲೀಕರು ಭಾಗವಹಿಸಲು ಕರೆ
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ವಾಣಿಜ್ಯ ತ್ಯಾಜ್ಯ/ಕಸ ವಿಲೇವಾರಿ ಬಗ್ಗೆ ಇಂದು ಸಂಜೆ 4ಕ್ಕೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಹಾಪೌರರಾದ ಕೆ. ಚಮನ್ ಸಾಬ್ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಹೋಟೆಲ್‌ಗಳು, ಬಾರ್ ಅಂಡ್ ರೆಸ್ಟೋರೆಂಟ್‌ಗಳು, ಲಾಡ್ಜ್‌ಗಳು, ಜ್ಯೂಸ್ ಅಂಗಡಿಗಳು, ಸೂಪರ್ ಮಾರ್ಕೆಟ್‌ಗಳು, ಬೇಕ ರಿಗಳು ಮತ್ತು ಕಲ್ಯಾಣ ಮಂಟಪಗಳ ಮಾಲೀಕರುಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕೆಂದು ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕ ಅವರು ಕೋರಿದ್ದಾರೆ.