ದಾವಣಗೆರೆ, ಡಿ. 13- ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ಉದ್ಘಾಟನಾ ಸಮಾರಂಭವು ನಾಡಿದ್ದು ದಿನಾಂಕ 15 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ಈಸ್ಟ್ ಶೇಷಾದ್ರಿಪುರಂ ಕುಮಾರ್ ಪಾರ್ಕ್‌ನ ಗಾಂಧಿ ಭವನ (ಬಾಪೂಜಿ ಸಭಾಂಗಣ)ದಲ್ಲಿ ನಡೆಯಲಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಯು. ಶ್ರೀನಿವಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜು ಅಧ್ಯಕ್ಷತೆ ವಹಿಸಲಿದ್ದು, ಪ್ರಧಾನ ಕಾರ್ಯದರ್ಶಿ ಸಬ್ಬಲಿ ರಾಯಚೂರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಬೆಂಗಳೂರಿನ ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ಸಂಸ್ಥಾಪಕ ವೀರೇಶ್ ಬೆಳ್ಳೂರು, ಉತ್ತರ ಕರ್ನಾಟಕ ಹೋರಾಟ ವೇದಿಕೆ ಬೆಳಗಾವಿಯ ರಾಜ್ಯಾಧ್ಯಕ್ಷ ಭೀಮಪ್ಪ ಗುಂಡಪ್ಪ ಗಡಾದ, ರಾಜ್ಯ ಮಾಹಿತಿ ಆಯೋಗದ ನಿವೃತ್ತ ಆಯುಕ್ತ ಕೃಷ್ಣಮೂರ್ತಿ, ಗ್ರಾಹಕ ಹಕ್ಕುಗಳ ಶಿಕ್ಷಣ ಮತ್ತು ಜಾಗೃತ ಟ್ರಸ್ಟ್ ಅಧ್ಯಕ್ಷ ವೈ.ಜೆ. ಮುರುಳೀಧರನ್, ವೇದಿಕೆ ರಾಜ್ಯ ಉಪಾಧ್ಯಕ್ಷ ಕೆ.ಟಿ. ಮಧು, ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಪಿ. ನವೀನ್ ಕುಮಾರ್, ಸಹ ಕಾರ್ಯದರ್ಶಿ ಎಂ.ಐ. ಚೇತನ್ ಕುಶಾಲಪ್ಪ ಸೇರಿದಂತೆ ರಾಜ್ಯಮಟ್ಟದ ಪದಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಸರ್ವ ಸದಸ್ಯರು ಭಾಗವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಎಸ್. ಶ್ರೇಯಸ್, ನಾಗರಾಜ್ ಸುರ್ವೆ, ಸುರೇಶ್ ಕುಮಾರ್ ಉಪಸ್ಥಿತರಿದ್ದರು.