ಮೈಸೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ವತಿಯಿಂದ ಯುನಿಸೆಫ್ ಸಹಯೋಗದಲ್ಲಿ ಮಕ್ಕಳ ಸಮಸ್ಯೆಗಳ ಕುರಿತು ಕರ್ನಾಟಕ ರಾಜ್ಯ ಪತ್ರಕರ್ತರಿಗಾಗಿ ಇಂದು ಮತ್ತು ನಾಳೆ ವೃತ್ತಿ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದೆ.
ಕಾರ್ಯಾಗಾರವನ್ನು ಕುಲಪತಿ ಪ್ರೊ. ಬಿ.ಡಿ. ಕುಂಬಾರ ಉದ್ಘಾಟಿಸುವರು. ಯುನಿಸೆಫ್ ಅಧಿಕಾರಿ ಪ್ರೊ. ಸನ್ ಸೇನ್, ಕುಲ ಸಚಿವ ಪ್ರೊ. ಯು.ಎಸ್.ಮಹಾಬಲೇಶ್ವರ ಅತಿಥಿಗಳಾಗಿ ಭಾಗವಹಿಸುವರು. ಮೈಸೂರು ವಿವಿ ಪತ್ರಿ ಕೋದ್ಯಮ ವಿಭಾಗದ ಅಧ್ಯಾಪಕಿ ಪ್ರೊ. ಎಂ.ಎಸ್. ಸಪ್ನಾ, ದಾವಣಗೆರೆ ವಿವಿ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕ ಪ್ರೊ. ಶಿವಕುಮಾರ ಕಣಸೋಗಿ ಉಪಸ್ಥಿತರಿರುವರು.