ಶ್ರೀಮತಿ ಸಹನಾ ರವಿ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಇಂದು ಬೆಳಿಗ್ಗೆ 10.30ಕ್ಕೆ `ಅನುಭಾವ’ ಶೀರ್ಷಿಕೆಯಲ್ಲಿ ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿ.ಪಂ. ಸಿಇಓ ಸುರೇಶ್ ಬಿ.ಇಟ್ನಾಳ್, ಮುಖ್ಯ ಅತಿಥಿಗಳಾಗಿ ಡಿಡಿಪಿಐ ಕೊಟ್ರೇಶ್, ವಿಶೇಷ ಆಹ್ವಾನಿತರಾಗಿ ತಹಶೀಲ್ದಾರ್ ಡಾ. ಅಶ್ವತ್ಥ್, ಬಾಪೂಜಿ ಆಸ್ಪತ್ರೆ ನಿರ್ದೇಶಕ ಡಾ. ಗುರುಪ್ರಸಾದ್, ದಕ್ಷಿಣ ಬಿಇಓ ಪುಷ್ಪಲತಾ ಅವರುಗಳು ಭಾಗವಹಿಸುವರು ಎಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಪಿ.ಎ. ರವಿ, ಕಾರ್ಯದರ್ಶಿ ಶ್ರೀಮತಿ ಸಹನಾ ರವಿ ತಿಳಿಸಿದ್ದಾರೆ.
February 5, 2025