22ಕ್ಕೆ ಜಿಲ್ಲಾ ಕುರುಬರ ಸಂಘದ ಸಭೆ

ದಾವಣಗೆರೆ, ಡಿ.17- ದಾವಣಗೆರೆ ಜಿಲ್ಲಾ ಕುರುಬರ ಸಂಘದ ಸಭೆಯನ್ನು ಇದೇ ದಿನಾಂಕ 22 ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಬೀರೇಶ್ವರ ಹಾಸ್ಟೆಲ್‌ನಲ್ಲಿ ಬಿ.ಹೆಚ್. ಪರಶುರಾಮಪ್ಪ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಸಮಾಜದ ಎಲ್ಲಾ ಸಂಘ-ಸಂಸ್ಥೆಗಳನ್ನು ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಡಿಯಲ್ಲಿ ತರುವುದು ಮತ್ತು ದಾವಣಗೆರೆ ಜಿಲ್ಲಾ ಕುರುಬರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗುವುದು. ಸಮಾಜ ಬಾಂಧವರು ಸಭೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಲೋಕಿಕೆರೆ ಸಿದ್ದಪ್ಪ ಮನವಿ ಮಾಡಿದ್ದಾರೆ.

error: Content is protected !!