ದಾವಣಗೆರೆ, ಡಿ.20- ಸಮಗ್ರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ 3ನೇ ವರ್ಷದ ಕನ್ನಡ ಹಬ್ಬ ಹಾಗೂ 69ನೇ ಕನ್ನಡ ರಾಜ್ಯೋತ್ಸವವನ್ನು ಡಿ.21ರ ಇಂದು ಸಂಜೆ 5.30ಕ್ಕೆ ಇಲ್ಲಿನ ಜಯದೇವ ವೃತ್ತದ ಶಿವಯೋಗಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ವಿ. ಅವಿನಾಶ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.
ಶಾಸಕ ಕೆ.ಎಸ್. ಬಸವಂತಪ್ಪ ಕನ್ನಡಾಂಬೆಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದು, ದಾವಣಗೆರೆ ವಿವಿ ಕುಲಪತಿ ಬಿ.ಡಿ. ಕುಂಬಾರ್ ಸಮಗ್ರ ಕರವೇ ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಿಸಲಿದ್ದಾರೆ ಮತ್ತು ಸಂಘದ ರಾಜ್ಯಾಧ್ಯಕ್ಷ ವಿ. ಅವಿನಾಶ್ ಅಧ್ಯಕ್ಷತೆ ವಹಿಸುವರು.
ವೇದಿಕೆ ಕಾರ್ಯಕ್ರಮದ ನಂತರ ಭಾರತಿ ಮೆಲೋಡಿ ಆರ್ಕೆಸ್ಟ್ರಾ ವೃಂದದ ವತಿಯಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ.
ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಾಲಾ ನಾಗರಾಜ್, ರೆಹಮಾನ್ ಖಾನ್, ಸೈಯ್ಯದ್ ಇಮ್ತಿಯಾಜ್, ಜಗದೀಶ್, ಡಿ.ಜೆ. ರಾಘವೇಂದ್ರ, ಭೋಜರಾಜ್, ಆನಂದ್, ಫಯಾಜ್ ಅಹಮದ್ ಸುದ್ದಿಗೋಷ್ಠಿಯಲ್ಲಿದ್ದರು.