ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ ಸಂಖ್ಯೆ 51) ದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿ ಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳ ಲಿದ್ದಾರೆ. ವಿವರಕ್ಕೆ ದೂ.ಸಂ: 81051 22556, 08192-259446ನ್ನು ಸಂಪರ್ಕಿಸಲು ಉದ್ಯೋಗಾಧಿ ಕಾರಿ ರವೀಂದ್ರ ಡಿ ತಿಳಿಸಿದ್ದಾರೆ.
February 6, 2025