ರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ವಿರುದ್ದ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಬೆಳಿಗ್ಗೆ 11 ಗಂಟೆಗೆ ಡಾ|| ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ.ಮಂಜಪ್ಪ ಮತ್ತು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಹೆಚ್.ವೀರಭದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆಯ ನಂತರ, ಬೆಳಗಾವಿಯಲ್ಲಿ ನೂರು ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಎಐಸಿಸಿ ಅಧಿವೇಶನ ನಡೆದ ಅಂಗವಾಗಿ ಇದೇ ದಿನಾಂಕ 27ರಂದು ನಡೆಯುವ ಕಾಂಗ್ರೆಸ್ ಪಕ್ಷದ ಬೃಹತ್ ಸಭೆ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪೂರ್ವಭಾವಿ
ಸಭೆಯನ್ನು ಇಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಎಸ್ಸೆಸ್ ಭವನದಲ್ಲಿ ಸಭೆ ಕರೆಯಲಾಗಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ಹೆಚ್.ಬಿ.ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಕರೆದಿರುವ ಈ ಸಭೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷ ಓಬೇದುಲ್ಲಾ ಷರೀಫ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಅವರುಗಳು ಆಗಮಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯ ದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.