ದಾವಣಗೆರೆ, ಡಿ. 22- ದಾವಣಗೆರೆ ಕುರುಬ ಸಮಾಜದ ವತಿಯಿಂದ ಬರುವ ಜನವರಿ 5 ರಂದು ಬೆಳಿಗ್ಗೆ 11.30 ಕ್ಕೆ ನಗರದ ಬಾಲಕರ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಜಿಲ್ಲಾ ಮಟ್ಟದ 537ನೇ ಕನಕದಾಸರ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಎಸ್. ರಾಮಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಸಚಿವರಾದ ಭೈರತಿ ಸುರೇಶ್, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಹೆಚ್.ಸಿ. ಮಹಾದೇವಪ್ಪ ಭಾಗವಹಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಬಿ.ಪಿ. ಹರೀಶ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ ಆಗಮಿಸಲಿದ್ದಾರೆ.
ಸಮಾಜದ ಮಠಾಧೀಶರು ಸಾನ್ನಿಧ್ಯ ವಹಿಸಲಿದ್ದು, ಸುಮಾರು 45 ರಿಂದ 50 ಸಾವಿರ ಜನ ಸೇರುವ ನಿರೀಕ್ಷೆ ಇದೆ. ಪಕ್ಷಾತೀತವಾಗಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.
ಜ. 4 ರಂದು ಬೆಳಿಗ್ಗೆ 9.30 ಕ್ಕೆ ಎಸ್.ಎಸ್. ಹೈಟೆಕ್ ರಸ್ತೆಯ ಶ್ರೀ ಬೀರೇಶ್ವರ ಬಡಾವಣೆಯ ಶ್ರೀ ಕಾಳಿದಾಸ ವೃತ್ತದಿಂದ ಬೈಕ್ ರಾಲಿ ಹಮ್ಮಿಕೊಳ್ಳಲಾಗಿದೆ.
ಜ.5 ರಂದು ಬೆಳಿಗ್ಗೆ 9.30 ಕ್ಕೆ ನಗರ ದೇವತೆ ಶ್ರೀ ದುರ್ಗಾಂಬಿಕ ದೇವಿ ದೇವಸ್ಥಾನದಿಂದ ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದವರೆಗೆ ಮೆರವಣಿಗೆ ಜರುಗಲಿದೆ. ವಬೆಳಿಗ್ಗೆ 11.30 ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ನಂತರ ಶ್ರೀ ಬೀರಲಿಂಗೇಶ್ವರ ದೇವ ಸ್ಥಾನದ ಆವರಣದಲ್ಲಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಜೆ.ಎನ್. ಶ್ರೀನಿವಾಸ್, ಹೆಚ್.ಬಿ. ಗೋಣೆಪ್ಪ, ಹೆಚ್. ಜಯಣ್ಣ, ಬಿ.ಬಿ. ಸಕ್ರಿ, ಮಲ್ಲಿಕಾ ರ್ಜುನ್, ಬಿ.ಹೆಚ್.ಪರಶುರಾಮಪ್ಪ, ಇಟ್ಟಿಗುಡಿ ಮಂಜುನಾಥ್, ಲಿಂಗರಾಜ್, ಹಾಲೇಕಲ್ಲು ಎಸ್.ಟಿ. ಅರವಿಂದ್, ಪಾಲಾಕ್ಷಪ್ಪ, ಶಿವಣ್ಣ, ಓಮಣ್ಣ, ಹಾಲೇಶಪ್ಪ, ಪುರಂದರ್ ಲೋಕಿಕೆರೆ ಮುಂತಾದವರು ಉಪಸ್ಥಿತರಿದ್ದರು.