ಡಾ. ಬಿ.ಆರ್. ಅಂಬೇಡ್ಕರ್ ಅವಹೇಳನ : ಅಮಿತ್ ಷಾ ವಿರುದ್ಧ ಇಂದು ಪ್ರತಿಭಟನೆ

ದಾವಣಗೆರೆ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಬಿಜೆಪಿ ವಿರುದ್ದ ದಿ. 24.12.2024 ರಂದು ಸಂಜೆ 4 ಗಂಟೆಗೆ ದಾವಣಗೆರೆಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಮತ್ತು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ಬಿ.ಹೆಚ್. ವೀರಭದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪನವರ ಅಧ್ಯಕ್ಷತೆಯಲ್ಲಿ ಕರೆದಿರುವ ಈ ಸಭೆಯಲ್ಲಿ ಸಚಿವರು, ಶಾಸಕರು, ಸಂಸದರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.

ಆದ ಕಾರಣ ದಾವಣಗೆರೆ ಜಿಲ್ಲೆಯ ಸಚಿವರು, ಎಲ್ಲಾ ಶಾಸಕರು, ಸಂಸದರು, ಕೆಪಿಸಿಸಿ ಸದಸ್ಯರು, ಕಾಂಗ್ರೆಸ್ ಪಕ್ಷದ ಎಲ್ಲಾ ಜನ ಪ್ರತಿನಿಧಿಗಳು, ಸರ್ಕಾರದಿಂದ ನೇಮಕಗೊಂಡಿರುವ ನಾಮ ನಿರ್ದೇಶನ ಸದಸ್ಯರುಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತರ, ಅಂಗವಿಕಲರ, ಕಿಸಾನ್ ಕಾಂಗ್ರೆಸ್, ಕಾರ್ಮಿಕರ, ವೈದ್ಯರ, ವಕೀಲರ ವಿಭಾಗಗಳು, ಎನ್.ಎಸ್.ಯು.ಐ., ಯುವ ಘಟಕ, ಮಹಿಳಾ ಘಟಕ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಗಮಿಸುವಂತೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶ್ರೀಮತಿ ಅನಿತಾ ಬಾಯಿ ಮಾಲತೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಅಯೂಬ್ ಪೈಲ್ವಾನ್, ಕೆ.ಜಿ. ಶಿವಕುಮಾರ್, ಬಿ.ಕೆ. ಪರಶುರಾಮ್, ಜಿ.ಸಿ. ನಿಂಗಪ್ಪ ಅವರುಗಳು ಕೋರಿದ್ದಾರೆ.

error: Content is protected !!