ದಾವಣಗೆರೆ, ಡಿ.25- ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 26 ಡಿಸೆಂಬರ್ 1924ರಂದು ಬೆಳಗಾವಿಯ ಕಾಂಗ್ರೆಸ್ ಅಧಿವೇಶನ ನಡೆದು, 100 ವರ್ಷ ಪೂರೈಸಿದ ಸವಿನೆನಪಿಗಾಗಿ ನಾಡಿದ್ದು ದಿನಾಂಕ 27 ರ ಶುಕ್ರವಾರ ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಶತಮಾನೋತ್ಸವ ಅಧಿವೇಶನದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಉಪಾಧ್ಯಕ್ಷರು, ಜಿಲ್ಲಾ ಸದಸ್ಯರು ಮತ್ತು ತಾಲ್ಲೂಕು ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸುವಂತೆ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷ ಸೂರಜ್
ಎಂ.ಎನ್. ಹೆಗಡೆ ಹಾಗೂ ಜಿಲ್ಲಾಧ್ಯಕ್ಷ ಶಾಮನೂರು ಟಿ. ಬಸವರಾಜ್ ಕೋರಿದ್ದಾರೆ.
December 26, 2024