ದಾವಣಗೆರೆ, ಡಿ.25- ಸರ್ಕಾರವು ಸಾಮಾನ್ಯ ಜನರ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲದಂತೆ ವರ್ತಿಸುತ್ತಿದೆ ಎಂದು ಸಮಾಜದ ಹಿರಿಯ ಮುಖಂಡ ಜೆ. ಸೋಮನಾಥ್ ದೂರಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ದೊಂಬರಾಟವನ್ನು ನೋಡಿದರೆ, ಬರೀ ಸ್ವಾರ್ಥ ಸಾಧನೆಗಳೇ ಕಾಣುತ್ತಿವೆ. ಜನರು ನಿಮ್ಮ ಮೇಲೆ ನಂಬಿಕೆ ಇಟ್ಟು ಅಧಿಕಾರ ನೀಡಿದ್ದಾರೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಅದು ಬಿಟ್ಟು ಬರೀ ದ್ವೇಷ ಮತ್ತು ಸ್ವಾರ್ಥ ರಾಜಕಾರಣಕ್ಕೆ ಮುಂದಾದರೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಸೋಮನಾಥ್ ಎಚ್ಚರಿಸಿದ್ದಾರೆ.
December 26, 2024