ದಾವಣಗೆರೆ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ ನೂತನ ಬ್ಯಾಂಕ್ ಕಟ್ಟಡದ ಶಂಕುಸ್ಥಾಪನೆ ಸಮಾರಂಭವು ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಕಚೇರಿ ಎದುರಿನ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿರುವ ರವೀಂದ್ರನಾಥ್ ಬಡಾವಣೆಯಲ್ಲಿ ನಡೆಯಲಿದೆ.
ಬ್ಯಾಂಕ್ ಶಂಕುಸ್ಥಾಪನೆಯನ್ನು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ, ರಾಜ್ಯ ಭೂ ಬ್ಯಾಂಕ್ ಅಧ್ಯಕ್ಷ ಕೆ. ಷಡಕ್ಷರಿ, ಶಾಸಕ ಕೆ.ಎಸ್ ಬಸವಂತಪ್ಪ ಸೇರಿದಂತೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.