ನಗರದ ಸಿದ್ದಗಂಗಾ ವಿದ್ಯಾಸಂಸ್ಥೆಯಲ್ಲಿ ಇಂದು ಶಾಲಾ ವಾರ್ಷಿಕೋತ್ಸವ

ಸಿದ್ಧಗಂಗಾ ವಿದ್ಯಾಸಂಸ್ಥೆಯಲ್ಲಿ ಸಂಸ್ಥೆಯ 55ನೇ ವಾರ್ಷಿಕ ಸಂಭ್ರಮಾಚರಣೆ ಇಂದು ಸಂಜೆ 5.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಜಸ್ಟಿನ್ ಡಿಸೋಜಾ ತಿಳಿಸಿದ್ದಾರೆ.

ಉಡುಪಿಯ ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ವೈದ್ಯ ಹಾಗೂ ಲೇಖಕ
ಡಾ.ವಿರೂಪಾಕ್ಷ ದೇವರಮನೆ ಕಾರ್ಯಕ್ರಮ ಉದ್ಘಾಟಿಸಲಿದ್ದು, 2023-24ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ 400 ವಿದ್ಯಾರ್ಥಿಗಳಲ್ಲಿ 132 ಮಕ್ಕಳಿಗೆ `ಸಿದ್ಧಗಂಗಾ ಪ್ರತಿಭಾ ಪುರಸ್ಕಾರ’ ನೀಡಲಾಗುವುದು ಎಂದರು. 

error: Content is protected !!