ದಾವಣಗೆರೆ, ಡಿ. 29 – ಜಿಲ್ಲಾ ಕಾರ್ಮಿಕ ವಿವಿಧೋದ್ದೇಶ ಸಹಕಾರ ಸಂಘವನ್ನು ದಾವಣಗೆರೆಯಲ್ಲಿ ಸ್ಥಾಪಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಮ್ಮತಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘವು ಚಳಿಗಾಲದ ಅಧಿವೇಶನದ ವೇಳೆ ನಡೆಸಿದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸ್ಪಂದಿಸಿದ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ.
ಏಜೆನ್ಸಿಗಳಿಂದ ಹೊರಗುತ್ತಿಗೆ ನೌಕರರ ಮೇಲೆ ನೆಡೆಯುತ್ತಿರುವ ಶೋಷಣೆ ತಡೆಯಲು ರಾಜ್ಯದ ಪ್ರತೀ ಜಿಲ್ಲೆಗಳಲ್ಲೂ ಇದೇ ಮಾದರಿಯಲ್ಲಿ ಕಾರ್ಮಿಕ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.
10ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಯನ್ನು
ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ
ತರಬೇಕು ಮತ್ತು ಕೆಲಸವನ್ನು ಖಾಯಂ ಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದೆ ಎಂದು ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಕೆ.ಹೆಚ್. ಆನಂದರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.