ಕಿವುಡ ಮಾಡಿದ ಕಿತಾಪತಿ ನಾಟಕ ಪ್ರದರ್ಶನ
ಕನ್ನಡ ರಂಗಭೂಮಿ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಸೇವೆ ಸಲ್ಲಿಸುತ್ತಿರುವ ಶ್ರೀ ಗುರು ವಾದ್ಯವೃಂದ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಸಂಚಾರಿ ಕೆ.ಬಿ.ಆರ್. ಡ್ರಾಮಾ ಕಂಪನಿ ಇವರ ಸಹಯೋಗದೊಂದಿಗೆ ಇಂದು ಸಂಜೆ 6ಕ್ಕೆ ಕುವೆಂಪು ಕನ್ನಡ ಭವನದಲ್ಲಿ ಕರ್ನಾಟಕ ಶ್ರೇಷ್ಠ ಕಲಾವಿದರಿಂದ `ಕಿವುಡ ಮಾಡಿದ ಕಿತಾಪತಿ’ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ಸಂಜೆ 5.30 ರಿಂದ 6ರವರೆಗೆ ದರ್ಶನ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಶ್ರೀ ಬಸವಪ್ರಭು ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕ.ಸಾ.ಪ. ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಸಮಾರಂಭದ ಅಧ್ಯಕ್ಷತೆ
ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಎನ್.ಡಿ. ತಿಪ್ಪೇಸ್ವಾಮಿ ಅವರು ಆಗಮಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹೊನ್ನಾಳಿ ತಹಶೀಲ್ದಾರ್ ಪಟ್ಟರಾಜ ಗೌಡ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ.ಎಂ. ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಉಪಸ್ಥಿತರಿರುವರು.
ಸಮಾರಂಭದ ಸಂಚಾಲಕರಾಗಿ ಬಿ.ಕೆ. ಗಣೇಶ್ ಬಿಸಲೇರಿ, ಬಿ. ಶಿವಕುಮಾರ್ ಉಪಸ್ಥಿತರಿರುವರು ಎಂದು ಶ್ರೀ ಗುರು ವಾದ್ಯವೃಂದದ ಅಧ್ಯಕ್ಷ ಚಿಂದೋಡಿ ಶಂಭುಲಿಂಗಪ್ಪ ತಿಳಿಸಿದ್ದಾರೆ.