ಕನ್ನಡ ಪುಸ್ತಕ ಪ್ರಾಧಿಕಾರದಿಂದ ಶೇ. 50 ರಷ್ಟು ರಿಯಾಯಿತಿ

ದಾವಣಗೆರೆ, ಜ. 1 – ಗಣರಾಜ್ಯೋತ್ಸವದ ಅಂಗವಾಗಿ 2025ರ ಜನವರಿ ತಿಂಗಳು ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು. ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in ನಲ್ಲಿ ಕೂಡ ಈ ಶೇ. 50 ರಿಯಾಯಿತಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-22107705 ಸಂಪರ್ಕಿಸಲು ಆಡಳಿತಾಧಿಕಾರಿ ಕಿರಣ್ ಸಿಂಗ್ ತಿಳಿಸಿದ್ದಾರೆ.

error: Content is protected !!