ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ

  ದಾವಣಗೆರೆ, ಜ.3- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 ಆನ್‍ಲೈನ್ https://shp.karnataka.gov.in ನಲ್ಲಿ ಇದೇ ದಿನಾಂಕ  10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.  

ದಾವಣಗೆರೆ  ಕುಂದುವಾಡ ರಸ್ತೆ,  ಶಿವಕುಮಾರ ಸ್ವಾಮಿ ಬಡಾವಣೆ,   ಗುತ್ತೂರು ಕಾಲೋನಿ, ಹರಿಹರ,  ಕೆರೆಬಿಳಚಿ,  ಜಗಳೂರು ಟೌನ್,  ಎಂ.ಸಿ,ಸಿ ಬಿ ಬ್ಲಾಕ್,  ಕೆ.ಟಿ.ಜೆ ನಗರಗಳಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ  ಪ್ರವೇಶ ಪಡೆಯಬಹುದು.  ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಛೇರಿ ದೂರವಾಣಿ  08192-250066 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

error: Content is protected !!