ಮಕ್ಕಳ ಚಿತ್ರಕಲಾ ತರಗತಿಗಳ ಉದ್ಘಾಟನೆ

ದಾವಣಗೆರೆ ಕಲಾ ಪರಿಷತ್‌ ವತಿಯಿಂದ ಚಿತ್ರಕಲಾ ಪ್ರದರ್ಶನ ಮತ್ತು ಮಕ್ಕಳ ಚಿತ್ರಕಲಾ ತರಗತಿ ಗಳ ಉದ್ಘಾಟನೆ ಕಾರ್ಯಕ್ರಮವು ಪರಿಷತ್ತಿನ ಕಚೇರಿಯಲ್ಲಿ ಇಂದು ಸಂಜೆ 5:30ಕ್ಕೆ ನಡೆಯಲಿದೆ.

ಹೊನ್ನಾಳಿ ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದೃಶ್ಯ ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಯರಾಜ ಚಿಕ್ಕ ಪಾಟೀಲ್ ಕಲಾ ಪ್ರದರ್ಶನದ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸಂಸ್ಕಾರ ಭಾರತಿ ಜಿಲ್ಲಾ ಸಮಿತಿ ಗೌರವಾಧ್ಯಕ್ಷ ಡಾ. ಆರ್ ಎಲ್. ಉಮಾಶಂಕರ್ ಪಾಲ್ಗೊಳ್ಳಲಿದ್ದು, ಪ್ರತಿಮಾ ಸಭಾದ ಅಧ್ಯಕ್ಷ ಬಾ.ಮ. ಬಸವರಾಜಯ್ಯ ಚಿತ್ರಕಲಾ ತರಗತಿಗಳಿಗೆ ಚಾಲನೆ ನೀಡಲಿದ್ದಾರೆ.

error: Content is protected !!