ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯ ಅಂದಾಜು ಪಟ್ಟಿ ತಯಾರಿಸಬೇಕಾಗಿದ್ದು, ಈ ಸಂಬಂಧ ಸಲಹೆ ಸೂಚನೆಗಳನ್ನು ನೀಡಲು ಇಂದು ಬೆಳಿಗ್ಗೆ 11 ಗಂಟೆಗೆ ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರ ಸಭೆಯನ್ನು ಕರೆಯಲಾಗಿದೆ. ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಕರೆಯಲಾಗಿರುವ ಸಭೆಯ ಅಧ್ಯಕ್ಷತೆಯನ್ನು ಮಹಾಪೌರ ಕೆ. ಚಮನ್ ಸಾಬ್ ವಹಿಸುವರು ಎಂದು ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕ ತಿಳಿಸಿದ್ದಾರೆ.
January 9, 2025