ಹಿಂಗಾರು ಬೆಳೆ ಸಮೀಕ್ಷೆಗೆ ರೈತರ ಆಪ್ ಬಿಡುಗಡೆ

ದಾವಣಗೆೇೆರೆ, ಜ.8- ರಾಜ್ಯ ಸರ್ಕಾರದ ಇ-ಆಡಳಿತ ಮತ್ತು ಕೃಷಿ ಇಲಾಖೆ  ಸಹಯೋಗದೊಂದಿಗೆ 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆಪ್ ಬಿಡುಗಡೆ ಮಾಡಿದ್ದು, ರೈತರು ಗೂಗಲ್ ಪ್ಲೇಸ್ಕೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್‌ಲೋಡ್ ಮಾಡಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.  ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು ಈ ಮಾಹಿತಿ  ಬಳಸಲಾ ಗುತ್ತದೆ. ಆದ್ದರಿಂದ ರೈತರು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು,  ತಾವೇ ಖುದ್ದಾಗಿ ದಾಖಲಿಸಲು ಅವರು ಕೋರಿದ್ದಾರೆ. 

ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಆಡಳಿತ ಅಧಿಕಾರಿ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯ ದೊಂದಿಗೆ ಬೆಳೆ ಮಾಹಿತಿಯನ್ನು ದಾಖಲಿಸಲು ಕೋರಿದೆ.

error: Content is protected !!