ನಗರದಲ್ಲಿ ನಾಳೆ ಅದಿತಿ, ಪ್ರತಿಭಾ ಪುರಸ್ಕಾರ

ದಾವಣಗೆರೆ, ಜ. 10 – ಅದಿತಿ ಎಜುಕೇಷನಲ್ ಟ್ರಸ್ಟ್ ನ ಸೈನ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜಿನಿಂದ ಅದಿತಿ – 2024-25 ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಾಡಿದ್ದು ದಿನಾಂಕ 12 ರ ಭಾನುವಾರ ಬೆಳಿಗ್ಗೆ 10.30ಕ್ಕೆ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸುರೇಶ್ ಬಿ.  ಇಟ್ನಾಳ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸ್ಫೂರ್ತಿ ಎಜುಕೇಷನಲ್ ಟ್ರಸ್ಟ್, ದವನ್ ಕಾಲೇಜಿನ ಕಾರ್ಯದರ್ಶಿ ವೀರೇಶ್ ಪಟೇಲ್, ವಿಜಯ ಕರ್ನಾಟಕ ದಿನ ಪತ್ರಿಕೆಯ ಸ್ಥಾನಿಕ ಸಂಪಾದಕ ಸದಾನಂದ ಹೆಗಡೆ ಆಗಮಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಜಿ. ವಿರೂಪಾಕ್ಷಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ಕಾಲೇಜಿನ ಹಳೆಯ ಸಾಧಕ ವಿದ್ಯಾರ್ಥಿಗಳಾದ, ಚಿಕ್ಕಬಳ್ಳಾಪುರ ಹಾಲು ಉತ್ಪನ್ನ ಒಕ್ಕೂಟದ ಸಹಾಯಕ ಪ್ರಬಂಧಕ ಡಾ. ಜಿ. ಸುನೀಲ್ ನಾಯ್ಡು, ಸರ್ಕಾರಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಡಾ. ಎಂ.ಪಿ. ಮುರುಗೇಶ್ ಹಾಗೂ ಎಂ.ಡಿ. ಮಾಡುತ್ತಿರುವ ಡಾ. ಚಂದನ್ ಜಿ.ನಾಯ್ಕ್ ಅವರುಗಳಿಗೆ `ಗೌರವ ಪುರಸ್ಕಾರ’ ನೀಡಲಾಗುತ್ತದೆ.

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಕಾಲೇಜಿಗೆ ಕೀರ್ತಿ ತಂದ 125ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ, ವಿವಿಧ ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳನ್ನೂ ಹಾಗೂ ಕ್ರೀಡೆಯಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅವರ ಪೋಷಕರೊಂದಿಗೆ ಸನ್ಮಾನಿಸಿ, ಗೌರವಿಸಲಾಗುತ್ತದೆ.

ಸಂಸ್ಥೆಯ ನಿರ್ದೇಶಕರೂ ಹಾಗೂ ದಾವಣಗೆರೆ ಮಹಾನಗರ ಪಾಲಿಕೆಯ ನಿಕಟಪೂರ್ವ ಮೇಯರ್ ಎಸ್.ಟಿ. ವೀರೇಶ್, ಸಂಸ್ಥೆಯ ಅಧ್ಯಕ್ಷ ಎ.ಹೆಚ್. ಶಶಿಕಿರಣ್, ಸಂಸ್ಥೆಯ ಕಾರ್ಯದರ್ಶಿ ವೈ.ವಿ. ವಿನಯ್, ಸಂಸ್ಥೆಯ ಉಪಾಧ್ಯಕ್ಷ ಕೆ. ರಘು ಅವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

error: Content is protected !!