ಗಣೇಶ್ ಪೇಟೆಯ ವಿನಾಯಕ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ ಕಾರ್ಯಕ್ರಮವು ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಇಂದು ಸಂಜೆ 4 ಗಂಟೆಗೆ ನಡೆಯಲಿದೆ. ಶಾಲಾ ಕಾರ್ಯದರ್ಶಿ ಡಾ. ವೀರೇಶ್ ಬಿ. ಬಿರಾದಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ. ಕೊಟ್ರೇಶ್, ಎಸ್ಪಿ ಶ್ರೀಮತಿ ಉಮಾ ಪ್ರಶಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಶೇರ್ ಅಲಿ, ಜಿಲ್ಲಾ ಶಾಶ್ವತ ಅನುದಾನ ರಹಿತ ಶಾಲಾ – ಕಾಲೇಜು ಆಡಳಿತ ಮಂಡಳಿ ಸಂಘದ ಅಧ್ಯಕ್ಷ ತ್ಯಾವಣಗಿ ವೀರಭದ್ರಸ್ವಾಮಿ, ಬ್ಯಾಂಕ್ ಆಫ್ ಮಹಾರಾಷ್ಟ್ರ ಬ್ರಾಂಚ್ ಮ್ಯಾನೇಜರ್ ಶ್ರೀಮತಿ ಎ. ಪ್ರಿಯಾಂಕ, ಹಿರಿಯ ಪತ್ರಕರ್ತ ಹೆಚ್.ಬಿ. ಮಂಜುನಾಥ್, ನಿಸರ್ಗ ಕಾನ್ವೆಂಟ್ ಕಾರ್ಯದರ್ಶಿ ಹೆಚ್.ಜಿ. ಪ್ರಕಾಶ್, ಸಾಹಿತಿ ಮಂಜುಳಾ ಸಂಗಮೇಶ್, ಹಳೇಪೇಟೆ ಕ್ಲಸ್ಟರ್ ಸಿಆರ್‌ಪಿ ಕೆ.ಎಂ. ಮಲ್ಲಿಕಾರ್ಜುನ್, ಇಂಜಿನಿಯರ್ ಕೆ.ಎಸ್. ಸ್ವರೂಪಾನಂದ ಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
January 13, 2025