ದಾವಣಗೆರೆ, ಜ. 15 – ಜಿಲ್ಲಾಧಿಕಾರಿ ಹಾಗೂ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷ ಜಿ.ಎಂ. ಗಂಗಾಧರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಇದೇ ದಿನಾಂಕ 21 ರಂದು ಬೆಳಗ್ಗೆ 11 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಲಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
January 16, 2025